ನವದೆಹಲಿ: ಸರ್ಕಾರದ ವಿವಿಧ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾಗಿರುವ 51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನ.30ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮತ್ತು ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
'ಉದ್ಯೋಗ ಮೇಳ'ದ ಭಾಗವಾಗಿ ದೇಶದಾದ್ಯಂತ 37 ಕಡೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಕಂದಾಯ, ಗೃಹ ವ್ಯವಹಾರ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ. ರಕ್ಷಣೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಆಯ್ಕೆಯಾದವರು ಇದರಲ್ಲಿ ಸೇರಿದ್ದಾರೆ ಎಂದು ಅದು ಮಂಗಳವಾರ ತಿಳಿಸಿದೆ.
ಉದ್ಯೋಗ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಅದು ತಿಳಿಸಿದೆ.