ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಮುಂದುವರೆದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ನಿಗದಿತ ವಿಮಾನಗಳನ್ನು ರದ್ದುಗೊಳಿಸಿದೆ.
ಅಕ್ಟೋಬರ್ 7 ರಿಂದ ಟೆಲ್ ಅವಿವ್‌ಗೆ ತೆರಳುವ ಮತ್ತು ಟೆಲ್ ಅವೀವ್‌ನಿಂದ ದೆಹಲಿಗೆ ಹಿಂದಿರುಗುವ ವಿಮಾನವನ್ನು ರದ್ದುಗೊಳಿಸಲಾಗಿದೆ.
ಇದೀಗ ನವೆಂಬರ್ 30 ರವರೆಗೆ ಟೆಲ್ ಅವಿವ್ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಸಾಮಾನ್ಯವಾಗಿ ಏರ್ ಇಂಡಿಯಾ ವಿಮಾನಗಳು ವಾರದಲ್ಲಿ ಐದು ದಿನ ರಾಷ್ಟ್ರ ರಾಜಧಾನಿಯಿಂದ ಟೆಲ್ ಅವಿವ್ ಗೆ ಕಾರ್ಯಾಚರಣೆ ನಡೆಸುತ್ತವೆ. ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಇರುತಿತ್ತು.
ಕಳೆದ ತಿಂಗಳು ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಆರಂಭವಾದ ನಂತರ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಅಡಿಯಲ್ಲಿ ಕೆಲವು ಚಾರ್ಟರ್ಡ್ ವಿಮಾನಗಳು ಕಾರ್ಯ ನಿರ್ವಹಿಸುತ್ತಿವೆ.