ಗಾಜಾ ಪಟ್ಟಿ: ಇಸ್ರೇಲ್ ವಿರುದ್ಧ ಯುದ್ಧ ಆರಂಭವಾದ ಬಳಿಕ ಪ್ಯಾಲೆಸ್ಟೀನ್ ವ್ಯಾಪ್ತಿಯಲ್ಲಿ 9,488 ಮಂದಿ ಸಾವಿಗೀಡಾಗಿದ್ದಾರೆ ಎಂದು ಗಾಜಾ ಪಟ್ಟಿಯ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಈ ಪೈಕಿ ಮೂರನೇ ಎಡರಷ್ಟು ಮಕ್ಕಳು ಮತ್ತು ಮಹಿಳೆಯರು ಎಂದು ಅದು ಮಾಹಿತಿ ನೀಡಿದೆ.3,900 ಮಕ್ಕಳು ಸಾವನ್ನಪ್ಪಿದ್ದಾರೆ.ಪ್ಯಾಲೆಸ್ಟೀನ್ ನಿರಾಶ್ರಿತರಿಗಾಗಿ ಉತ್ತರ ಗಾಜಾದಲ್ಲಿ ವಿಶ್ವಸಂಸ್ಥೆ ನಡೆಸುತ್ತಿರುವ ಅಲ್-ಫಖುರ ಶಾಲೆ ಮೇಲೆ ಇಸ್ರೇಲ್ ದಾಳಿ ನಡೆಸಿದ್ದರಿಂದ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.
ಜಬಾಲಿಯಾ ನಿರಾಶ್ರಿತರ ಕೇಂದ್ರದ ಮೇಲೆ ಇಸ್ರೇಲ್ ದಾಳಿ ನಡೆಸಿದಾಗ ಅಲ್ಲಿ ಹಲವು ಮಂದಿ ಇದ್ದರು ಎಂದು ಹಮಾಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್ ಮೇಲೆ ದಾಳಿ ನಡೆಸಿದ್ದರು. ಇಸ್ರೇಲ್ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ನಾಗರಿಕರು ಸಾವಿಗೀಡಾಗಿದ್ದಾರೆ. 240ಕ್ಕೂ ಅಧಿಕ ಮಂದಿಯನ್ನು ಅಪಹರಣ ಮಾಡಲಾಗಿದೆ.