HEALTH TIPS

ಡಿ. 4 -22ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

             ವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್‌ 4ರಿಂದ ಆರಂಭವಾಗಿ ಡಿಸೆಂಬರ್‌ 22ಕ್ಕೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.


                ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು 'ಸಂಸತ್ತಿನ 2023 ರ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಇರಲಿದೆ.

19 ದಿನಗಳಲ್ಲಿ 15 ಅಧಿವೇಶನಗಳು ನಡೆಯಲಿದೆ' ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

               ಈಗಾಗಲೇ ಲೋಕಸಭೆಯಲ್ಲಿ ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಇಂಡಿಯನ್ ಎವಿಡನ್ಸ್ ಆಯಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಇವುಗಳಿಗೆ ಅನುಮೋದನೆ ಪಡೆಯಲು ಅಧಿವೇಶನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries