ಮುಳ್ಳೇರಿಯ: ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ಕ್ಷೇತ್ರದ ನವೀಕರಣ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24ರಿಂದ ಡಿ.29ರ ತನಕ ವಿವಿಧ ತಾಂತ್ರಿಕ, ವೈದಿಕ,ಧಾರ್ಮಿಕ ಹಾಗೂ ಸಾಂಸ್ಕøತಿ ಕಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಇದರಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ.4ರಂದು ಬೆಳಗ್ಗೆ 9.30ಕ್ಕೆ ಶ್ರೀ ಕ್ಷೇತ್ರ ಪರಿಸರದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಜಂಟಿ ಮುಖ್ಯ ಚುನಾವಣಾಕಾರಿ ಡಿ. ಶಂಭು ಭಟ್ ನಿರ್ವಹಿಸವರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಉದ್ಯಮಿ ಬಿ.ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಶಂಕರನಾರಾಯಣ ಶರ್ಮಾ ಗೋಸಾಡ ಉಪಸ್ಥಿತರಿರುವರು. ಮುಖ್ಯಅತಿಥಿಗಳಾಗಿ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತರ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಕಿಶೋರ್ ಕುಮಾರ್ ಕುಣಿಕುಳ್ಳಾಯ , ಅಧ್ಯಾಪಕ ಹರಿನಾರಾಯಣ ಶಿರಂತಡ್ಕ ಭಾಗವಹಿಸುವರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಅನಂತ ಭಟ್ ಕುರುಮುಜ್ಜಿ, ಕಾರ್ಯಾಧ್ಯಕ್ಷ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ, ಅನುವಂಶಿಕ ಮೊಕ್ತೇಸರ ಬಿ.ನಾರಾಯಣ ಮಣಿಯಾಣಿ ಬೆಳ್ಳಿಗೆ, ಆಡಳಿತ ಮೊಕ್ತೇಸರ ನ್ಯಾಯವಾದಿ ಮವ್ವಾರು ನಾರಾಯಣ ಭಟ್, ಬ್ರಹ್ಮಕಲಶೋತ್ಸವ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣಮೂರ್ತಿ ಎಡೆಪ್ಪಾಡಿ, ಸೀತಾರಾಮ ಭಟ್ ಮುಂಗಿಲ ಮತ್ತಿತರರು ಉಪಸ್ಥಿತರಿರುವರು.