ಇಡುಕ್ಕಿ : ಭಾನುವಾರ (ನ.5) ಕೇರಳದಲ್ಲಿ ಭಾರೀ ಮಳೆ ಸುರಿದಿದ್ದು, ಇಡುಕ್ಕಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಡುಕ್ಕಿ : ಭಾನುವಾರ (ನ.5) ಕೇರಳದಲ್ಲಿ ಭಾರೀ ಮಳೆ ಸುರಿದಿದ್ದು, ಇಡುಕ್ಕಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸತತ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಇದಲ್ಲದೆ, ಭೂಕುಸಿತದಿಂದಾಗಿ ಇಡುಕ್ಕಿಯ ಮುಖ್ಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಪಂಚಾಯತ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.
ಬಿರುಸಿನಿಂದ ಸುರಿಯುತ್ತಿರುವ ಮಳೆ ಕುರಿತು ವರದಿ ಪ್ರಕಟಿಸಿರುವ ಭಾರತೀಯ ಹವಾಮಾನ ಇಲಾಖೆ (IMD) ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಮುಂದಿನ 5 ದಿನಗಳು ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ತಮಿಳುನಾಡು ಮತ್ತು ನೆರೆ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಸೈಕ್ಲೋನಿಕ್ ಪರಿಚಲನೆಯಿಂದಾಗಿ ಮುಂದಿನ ಐದು ದಿನಗಳು ಮಳೆ ಸಂಭವಿಸಲಿದೆ ಎಂದು ಹೇಳಿದೆ.
ನವೆಂಬರ್ 6 ರಿಂದ ನವೆಂಬರ್ 9 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಎರ್ನಾಕುಲಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚುವರಿಯಾಗಿ, ಒಂಬತ್ತು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ. ಭೂಕುಸಿತದ ಅಪಾಯದ ಹಿನ್ನೆಲೆಯಲ್ಲಿ ಇಡುಕ್ಕಿ ಜಿಲ್ಲಾಡಳಿತವು ಮುನ್ನಾರ್-ಕುಮಿಲಿ ರಾಜ್ಯ ಹೆದ್ದಾರಿಯಲ್ಲಿ ಉಡಂಬಚೋಳ ಮತ್ತು ಚೆರಿಯಾರ್ ಪ್ರದೇಶಗಳ ನಡುವೆ ರಾತ್ರಿ ಪ್ರಯಾಣವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
ನವೆಂಬರ್ 8 ರಿಂದ ಮುಂದಿನ ಸೂಚನೆ ಲಭಿಸುವವರೆಗೂ ರಾತ್ರಿ 7 ರಿಂದ ಬೆಳಿಗ್ಗೆ 6 ರವರೆಗೆ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.