ಲಾಹೋರ್: ಪಾಕಿಸ್ತಾನದ ನಿಕಟ ಪೂರ್ವ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಸೇರಿದ 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಲಾಹೋರ್: ಪಾಕಿಸ್ತಾನದ ನಿಕಟ ಪೂರ್ವ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಸೇರಿದ 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಇಮ್ರಾನ್ ಖಾನ್ ಬಂಧನ ವೇಳೆ ಸೇನೆ ಹಾಗೂ ಪಿಟಿಐ ಕಾರ್ಯಕರ್ತರ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಪಾಕ್ ಪೊಲೀಸರು 60ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
ಸೇನಾ ಯೋಧರ ಮೇಲೆ ದಾಳಿ ಹಾಗೂ ಸೇನೆಯ ನೆಲೆಗಳನ್ನು ನಾಶಪಡಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತರು ಪಂಜಾಬ್ ಪ್ರಾಂತ್ಯದವರು ಎಂದು ಪೊಲೀಸರು ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ನಂತರ ಪಿಟಿಐ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಪೊಲೀಸ್ ಕ್ರಮವನ್ನು ತೀವ್ರಗೊಳಿಸಲಾಗಿದೆ ಎಂದು ಪಿಟಿಐ ನಾಯಕರು ಆರೋಪಿಸಿದ್ದಾರೆ.
ಕಳೆದ ಮೇ ತಿಂಗಳಿಂದ ಇಲ್ಲಿಯವರೆಗೂ ಪಿಟಿಐ ಪಕ್ಷದ ಮುಖಂಡರು ಸೇರಿದಂತೆ ಸುಮಾರು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಜೈಲಿನಲ್ಲಿ ಇಡಲಾಗಿದೆ ಎಂದು ಪಿಟಿಐ ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.