ತಿರುವನಂತಪುರಂ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ವಿವಿಧ ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರದ ಯೋಜನೆಗಳ ಆರ್ಥಿಕ ನೆರವನ್ನು ಇಂದು ವಿತರಿಸಲಿದ್ದಾರೆ.
ಸಮಾರಂಭವು ತಿರುವನಂತಪುರಂನ ಅಟ್ಟಿಂಗಲ್ ಮಾಮಂ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ವಿದೇಶಾಂಗ ವ್ಯವಹಾರಗಳ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯ ಬ್ಯಾಂಕಿಂಗ್ ಸಮಿತಿ ನೇತೃತ್ವದಲ್ಲಿ ಕೆನರಾ ಬ್ಯಾಂಕ್ ಹಾಗೂ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ನಬಾರ್ಡ್, ಎಸ್ ಐಡಿಬಿಐ ಹಾಗೂ ವಿವಿಧ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಮುದ್ರಾ, ಸ್ಟ್ಯಾಂಡ್ ಅಪ್ ಇಂಡಿಯಾ, ಪಿ.ಎಂ. ಸ್ವಾನಿಧಿ ಮತ್ತು ಪಿಎಂಇಜಿಪಿಯಂತಹ ವಿವಿಧ ಕೇಂದ್ರ ಯೋಜನೆಗಳ ಅಡಿಯಲ್ಲಿ ನೋಂದಾಯಿಸಲಾದ 1,52,704 ಫಲಾನುಭವಿ ಖಾತೆಗಳ ಮೂಲಕ 6,014.92 ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು.
ಕಾರ್ಯಕ್ರಮದಲ್ಲಿ ನಬಾರ್ಡ್‍ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ 56.16 ಕೋಟಿ ಮಂಜೂರಾತಿ ಪತ್ರಗಳು ಮತ್ತು ಎಸ್‍ಐಡಿಬಿಐ ಮಧ್ಯಸ್ಥಿಕೆ ಮೂಲಕ ವಿವಿಧ ಸಂಸ್ಥೆಗಳಿಗೆ 3.32 ಕೋಟಿ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಲಾಗುವುದು.
ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವರು ಎಸ್‍ಬಿಐನ ಕ್ಯಾಶ್ ವ್ಯಾನ್ ಮತ್ತು ಎಟಿಎಂ ವ್ಯಾನ್‍ಗೆ ಫ್ಲ್ಯಾಗ್ ಆಫ್ ಮಾಡಲಿದ್ದಾರೆ. ಮೈಕ್ರೋ ಎಟಿಎಂಗಳನ್ನು ಕೇರಳ ಗ್ರಾಮೀಣ ಬ್ಯಾಂಕ್‍ನ ಐವರು ಬ್ಯಾಂಕಿಂಗ್ ಕರೆಸ್ಪಾಂಡೆಂಟ್‍ಗಳಿಗೆ ಹಸ್ತಾಂತರಿಸಲಾಗುವುದು.
ಸಂಜೆ 4.30ಕ್ಕೆ ತಿರುವನಂತಪುರಂ ಹಯಾತ್ ರೀಜೆನ್ಸಿಯಲ್ಲಿ ಕೇಂದ್ರ ಹಣಕಾಸು ಸಚಿವರು 'ಎಮರ್ಜಿಂಗ್ ಭಾರತ್, ಗ್ರೋಯಿಂಗ್ ಕೇರಳ' ವ್ಯಾಪಾರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್, ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್À್ಷ್ಸಂಸದ ಪಿ. ಸಂತೊಷ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.