ಕೊಚ್ಚಿ: ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ. ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ.
ಕೊಚ್ಚಿ: ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ. ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ.
ಮೃತರನ್ನು ಮೊಲಿ ಜಾಯ್ ಎಂದು ಗುರುತಿಸಲಾಗಿದ್ದು, ಕಳಮಶ್ಶೇರಿಯ ನಿವಾಸಿ ಎಂದು ತಿಳಿದುಬಂದಿದೆ.
ಅಕ್ಟೋಬರ್ 29ರಂದು ಸಂಭವಿಸಿದ್ದ ಸ್ಫೋಟದಲ್ಲಿ ಮಹಿಳೆಗೆ ಶೇಕಡ 70ರಷ್ಟು ಸುಟ್ಟ ಗಾಯಗಳಾಗಿದ್ದವು. ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷ ವಯಸ್ಸಿನ ಲಿಬಿನಾ ಎಂಬ ಬಾಲಕಿ ಅ.30ರಂದು ಮೃತಪಟ್ಟಿದ್ದಳು. ಸ್ಫೋಟ ನಡೆದ ದಿನವೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು.
ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ, ಸ್ಫೋಟಕ್ಕೆ ಹೊಣೆ ಹೊತ್ತುಕೊಂಡು ಪೊಲೀಸರಿಗೆ ಶರಣಾಗಿದ್ದ.