ಅಹ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ನೀಡಿದ 241 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆಸ್ಚ್ರೇಲಿಯಾ ತಂಡ ಟ್ರಾವಿಸ್ ಹೆಡ್ ಶತಕ ಮತ್ತು ಲಬುಶೇನ್ ರ ಅರ್ಧಶತಕದ ನೆರವಿನಿಂದ ಗುರಿ ತಲುಪಿ ಜಯಭೇರಿ ಭಾರಿಸಿತು. ಆ ಮೂಲಕ 6ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
ಕೇವಲ 47 ರನ್ ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. 120 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 15 ಬೌಂಡರಿ ನೆರವಿನಿಂದ ಹೆಡ್ 137 ರನ್ ಗಳಿಸಿ ಸಿರಾಜ್ ಬೌಲಿಂಗ್ ನಲ್ಲಿ ಅಂತಿಮ ಹಂತದಲ್ಲಿ ವಿಕೆಟ್ ಒಪ್ಪಿಸಿದರು.
ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.