ಪತ್ತನಂತಿಟ್ಟ: ಶಬರಿಮಲೆ ಮಂಡಲ ಅವಧಿ ಆರಂಭವಾಗಿ ದಿನ ಕಳೆದಂತೆಲ್ಲ ಸನ್ನಿಧಿ ಅಯ್ಯಪ್ಪ ಭಕ್ತರಿಂದ ತುಂಬಿ ತುಳುಕುತ್ತಿದೆ. ಶುಕ್ರವಾರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದಾರೆ.
ಶುಕ್ರವಾರವೊಂದೇ ದಿನ 70 ಸಾವಿರಕ್ಕೂ ಹೆಚ್ಚು ಭಕ್ತರು ದೇಗುಲಕ್ಕೆ ಆಗಮಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಶನಿವಾರ ಕೂಡ ಶಬರಿಮಲೆಯಲ್ಲಿ ಜನಸಂದಣಿ ಹೆಚ್ಚಿತ್ತು. ಶನಿವಾರ 60,000 ಕ್ಕೂ ಹೆಚ್ಚು ಭಕ್ತರು ವರ್ಚುವಲ್ ಕ್ಯೂ ಮೂಲಕ ಟಿಕೆಟ್ ಕಾಯ್ದಿರಿಸಿದ್ದರು.
ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ಶುಕ್ರವಾರ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗಿದ್ದು, ಪಂಬಾ ಸ್ನಾನಕ್ಕೆ ಮುನ್ನೆಚ್ಚರಿಕೆ ನೀಡಲಾಗಿತ್ತು. ಕಾಯ್ದಿರಿಸಿದ ಯಾತ್ರಾರ್ಥಿಗಳೊಂದಿಗೆ ಸ್ಪಾಟ್ ಬುಕ್ಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ನೂಕುನುಗ್ಗಲು ಪರಿಗಣಿಸಿ ಯಾತ್ರೆಗೆ ಬರುವ ಮಕ್ಕಳಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.