ಚಂಡೀಗಢ: ರಾಜ್ಯದ ನಿವಾಸಿಗಳಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 75 ರಷ್ಟು ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ 2020ರಲ್ಲಿ ಹರಿಯಾಣ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ರದ್ದು ಮಾಡಿದೆ.
ಚಂಡೀಗಢ: ರಾಜ್ಯದ ನಿವಾಸಿಗಳಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 75 ರಷ್ಟು ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ 2020ರಲ್ಲಿ ಹರಿಯಾಣ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ ರದ್ದು ಮಾಡಿದೆ.
ನ್ಯಾಯಮೂರ್ತಿಗಳಾದ ಜಿ ಎಸ್ ಸಂಧವಾಲಿಯಾ ಮತ್ತು ಹರ್‌ಪ್ರೀತ್ ಕೌರ್ ಜೀವನ್ ಅವರು ತೀರ್ಪು ಪ್ರಕಟಿಸಿದರು.
ಸಂಪೂರ್ಣ ಕಾಯ್ದೆಯನ್ನು ಪೀಠ ರದ್ದುಪಡಿಸಿದೆ ಎಂದು ವಕೀಲ ಅಕ್ಷಯ್ ಭನ್ ಹೇಳಿದ್ದಾರೆ.
ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆಯು ಸಂವಿಧಾನದ 14 ಮತ್ತು 19ನೇ ವಿಧಿಗಳನ್ನು ಉಲ್ಲಂಘಿಸಿದೆ ಎಂದು ವಾದಿಸಲಾಗಿತ್ತು ಎಂದು ಅರ್ಜಿದಾರರ ಪರ ವಕೀಲರಾದ ಭಾನ್ ಹೇಳಿದರು.
ರಾಜ್ಯದ ಅಭ್ಯರ್ಥಿಗಳಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 75ರಷ್ಟು ಮೀಸಲಾತಿ ಕಲ್ಪಿಸುವ ಕಾಯ್ದೆಯ ಅನುಷ್ಠಾನದ ವಿರುದ್ಧ ನ್ಯಾಯಾಲಯಕ್ಕೆ ಹಲವು ಅರ್ಜಿಗಳು ಬಂದಿದ್ದವು.
ಗರಿಷ್ಠ ಮಾಸಿಕ ವೇತನ ₹30,000ವರೆಗಿನ ಉದ್ಯೋಗಗಳಿಗೆ ಈ ಕಾನೂನು ಅನ್ವಯಿಸಲಾಗಿತ್ತು.