ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯು ಜನವರಿ 7ರಂದು ನಡೆಯಲಿದೆ ಎಂದು ಮುಖ್ಯಚುನಾವಣಾ ಆಯುಕ್ತರು ಬುಧವಾರ ಘೋಷಿಸಿದ್ದಾರೆ.
ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯು ಜನವರಿ 7ರಂದು ನಡೆಯಲಿದೆ ಎಂದು ಮುಖ್ಯಚುನಾವಣಾ ಆಯುಕ್ತರು ಬುಧವಾರ ಘೋಷಿಸಿದ್ದಾರೆ.
ಹಂಗಾಮಿ ಸರ್ಕಾರವು ಪಾರದರ್ಶಕವಾಗಿ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮತ್ತು ಅದರ ಮಿತ್ರಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿರುವುದರ ನಡುವೆಯೇ ಈ ಘೋಷಣೆ ಹೊರಬಿದ್ದಿದೆ.
ನಾಮಪತ್ರ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಡಿಸೆಂಬರ್ 1ರಿಂದ 4ರ ವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಲ್ ವಿವರಿಸಿದ್ದಾರೆ.
ಡಿಸೆಂಬರ್ 18 ರಿಂದ ಜನವರಿ 5ರವರೆಗೆ ಪ್ರಚಾರ ಕಾರ್ಯ ನಡೆಯಲಿದೆ.
ಚುನಾವಣಾ ದಿನಾಂಕ ಘೋಷಣೆಯ ಕಾರಣ ಢಾಕಾ ಮತ್ತು ಪ್ರಮುಖ ನಗರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.