ಉತ್ತರಕಾಶಿ: ಉತ್ತರಾ ಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊರೆಯಲಾಗಿರುವ ಸುರಂಗ ಕುಸಿದು ಒಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 7ನೇ ದಿನವಾದ ಶನಿವಾರವೂ ಮುಂದುವರೆದಿದೆ.
ಉತ್ತರಕಾಶಿ: ಉತ್ತರಾ ಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊರೆಯಲಾಗಿರುವ ಸುರಂಗ ಕುಸಿದು ಒಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 7ನೇ ದಿನವಾದ ಶನಿವಾರವೂ ಮುಂದುವರೆದಿದೆ.
ಇಂದು ಬೆಳಗ್ಗೆಯಿಂದ ರಂಧ್ರ ಕೊರೆಯುವ ಕೆಲಸವನ್ನು ನಿಲ್ಲಿಸಲಾಗಿದೆ.
'ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ತರುವುದಕ್ಕೆ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕುಸಿದಿರುವ ಸುರಂಗದ ಅವಶೇಷಗಳ ಮೂಲಕ ಈ ವರೆಗೆ 25 ಮೀಟರ್ ಉದ್ದಕ್ಕೆ ಪೈಪ್‌ಗಳನ್ನು ಅಳವಡಿಸಲಾಗಿದೆ' ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಇನ್ನೊಂದೆಡೆ, 'ಎಲ್ಲ ಕಾರ್ಮಿಕರು ಸುರಕ್ಷಿತವಾಗಿದ್ದಾರೆ' ಎಂದು ಹಿರಿಯ ಅಧಿಕಾರಿಗಳು ಹೇಳಿದ್ದರೆ, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು ತಮ್ಮ ಕುಟುಂಬಸ್ಥರೊಂದಿಗೆ ಮಾತನಾಡಿದ್ದಾಗಿ ಮೂಲಗಳು ಹೇಳಿವೆ. ಆದಾಗ್ಯೂ ಕಾರ್ಮಿಕರ ಕುಟುಂಬದವರು ಆತಂಕ ವ್ಯಕ್ತಪಡಿಸಿದ್ದಾರೆ.