ನವದೆಹಲಿ: ಕಳೆದ ಜನವರಿಯಲ್ಲಿ ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣದ ವೇಳೆ ಸಂಭವಿಸಿದ್ದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ 7 ಜನ ಪೊಲೀಸ್ ಅಧಿಕಾರಿಗಳನ್ನು ಪಂಜಾಬ್ ಸರ್ಕಾರ ಅಮಾನತು ಮಾಡಿದೆ.
ಫಿರೋಜ್‌ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು, ರಸ್ತೆತಡೆಯ ಕಾರಣ ಮೇಲ್ಸೇತುವೆಯಲ್ಲಿ 15-20 ನಿಮಿಷ ಸಿಲುಕಿದ್ದರು. ನಂತರ ಅವರು ಅಲ್ಲಿಂದ ವಾಪಸಾಗಿದ್ದರು.
ಬಳಿಕ ಭದ್ರತಾ ಲೋಪದ ತನಿಖೆಗೆ ಪಂಜಾಬ್ ಹಾಗೂ ಕೇಂದ್ರ ಸರ್ಕಾರಗಳು ಪ್ರತ್ಯೇಕ ಸಮಿತಿ ರಚಿಸಿದ್ದವು. ಸುಪ್ರೀಂ ಕೋರ್ಟ್ ಸಹ ಸಮಿತಿ ರಚಿಸಿತ್ತು. ಇದಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಸುಪ್ರೀಂ ಕೋರ್ಟ್ ಸಮಿತಿ ಹೇಳಿತ್ತು.
ಇದೀಗ ಪಂಜಾಬ್ ಸರ್ಕಾರ 7 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇವರ ಪೈಕಿ ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ನಾಲ್ವರು ಎಸ್‌ಐ ಶ್ರೇಣಿಯ ಅಧಿಕಾರಿಗಳು ಎಂದು ಸರ್ಕಾರ ತಿಳಿಸಿದೆ.
ಕಳೆದ ಜನವರಿಯಲ್ಲಿ, ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು, ರಸ್ತೆತಡೆಯ ಕಾರಣ ಮೇಲ್ಸೇತುವೆಯಲ್ಲಿ 15-20 ನಿಮಿಷ ಸಿಲುಕಿದ್ದರು. ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡುವುದನ್ನು ವಿರೋಧಿಸಿದ ರೈತ ಸಂಘಟನೆಯು ರಸ್ತೆತಡೆ ನಡೆಸಿತ್ತು. ಹೀಗಾಗಿ, ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿ ಅವರು ವಾಪಸಾಗಿದ್ದರು. ಇದು ದೇಶದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.