ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರ 96ನೇ ಜನ್ಮದಿನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಶುಭಾಶಯ ತಿಳಿಸಿದ್ದಾರೆ.
ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರ 96ನೇ ಜನ್ಮದಿನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದ ಮೋದಿ, ಅಡ್ವಾಣಿ ಅವರು ನಮ್ಮ ರಾಷ್ಟ್ರವನ್ನು ಬಲಪಡಿಸುವ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಯ ದಾರಿದೀಪ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ' ಎಂದು ಬರೆದುಕೊಂಡಿದ್ದರು.