ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಮಣಿಪುರದಲ್ಲಿ ಹೆಚ್ಚು ಸಕ್ರಿಯವಾಗಿದ್ದ ಒಂಬತ್ತು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ನಿಷೇಧಿಸಿದೆ ಎಂದು ಸುದ್ದಿಸಂಸ್ಥೆ 'ಪಿಟಿಐ' ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಮಣಿಪುರ ಉದ್ಭವಿಸಿರುವ ಜನಾಂಗೀಯ ಹಿಂಸಾಚಾರವನ್ನು ನಿಯಂತ್ರಿಸಲು ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
ಫಿಜಾಮ್ ಹೇಮಜಿತ್ (20), ಹಿಜಾಮ್ ಲಿಂಥೋಯ್ನ್‌ಗಂಬಿ (17) ಎಂಬ ಯುವಕ ಮತ್ತು ಯುವತಿ ಜುಲೈ 6ರಂದು ನಾಪತ್ತೆಯಾಗಿದ್ದರು. ಅವರ ಮೃತದೇಹಗಳ ಚಿತ್ರಗಳು ಸೆ.25ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಇಂಫಾಲ್‌ನಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿತ್ತು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮ್ಯಾನ್ಮಾರ್ ಮೂಲದ ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರನ್ನು ಮಣಿಪುರದ ಚುರಚಾಂದ್‌ಪುರದಲ್ಲಿ ಪೊಲೀಸರು ಬಂಧಿಸಿದ್ದು, ಶಸ್ತ್ರಾಸ್ತ್ರಗಳನ್ನು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಭಾರತ- ಮ್ಯಾನ್ಮಾರ್ ಗಡಿ ಬಳಿಯ ಚೈಜಾಂಗ್ ಪ್ರದೇಶದಿಂದ ಇವರನ್ನು ಬಂಧಿಸಿದ್ದು, ಎ.ಕೆ. 47, ಇನ್ಸಾಸ್, ಸ್ನೈಪರ್ ಮತ್ತು ಎಂ.16 ರೈಫಲ್‌ಗಳು, ಮದ್ದುಗುಂಡುಗಳು, ₹4.86 ಲಕ್ಷ ನಗದು ಹಾಗೂ ಎರಡೂವರೆ ಕೆ.ಜಿ. ಅಫೀಮು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪುರ ಗಲಭೆಯ ಹಿಂದೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಕೈವಾಡ ಇದೆ ಎಂದು ಈ ಹಿಂದೆ ಆರೋಪಿಸಲಾಗಿತ್ತು. ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಕೆಲವು ಪ್ರಕರಣಗಳ ತನಿಖೆಯನ್ನು ಕೈಗೆತ್ತಿಕೊಂಡಿತ್ತು.