ನವದೆಹಲಿ: ಎಲ್‌ನಿನೊ ಪರಿಣಾಮದಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.
ನವದೆಹಲಿ: ಎಲ್‌ನಿನೊ ಪರಿಣಾಮದಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ, ಎಲ್‌ನಿನೊ ಹೊರತಾಗಿಯೂ, ಭಾರತದ ವಾಯವ್ಯ, ಪೂರ್ವ-ಕೇಂದ್ರ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಎಲ್‌ನಿನೊ ಪರಿಸ್ಥಿತಿಯಿಂದಾಗಿ ದೇಶದಲ್ಲಿ ಬಿಸಿಯ ವಾತಾವರಣಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಆದರೆ, ಮುಂದಿನ ವರ್ಷದ ಮುಂಗಾರು ಅವಧಿ ವೇಳೆಗೆ ಎಲ್‌ನಿನೊ ಮುಂದುವರಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಅಮೆರಿಕದ ಪೆಸಿಫಿಕ್ ಸಾಗರದ ಮೇಲ್ಮೈಯಲ್ಲಿನ ತಾಪಮಾನದಲ್ಲಿ ಆಗುವ ಬದಲಾವಣೆಯನ್ನು ಎನ್‌ನಿನೊ ಎಂದು ಕರೆಯುತ್ತಾರೆ. ಇದು ಮಾನ್ಸೂನ್ ಮಾರುತಗಳ ಮೇಲೆ ಪರಿಣಾಮ ಬೀರಲಿದ್ದು, ಭಾರತದಲ್ಲಿ ಮುಂಗಾರು ಮಳೆಗೆ ಅಡ್ಡಿಯಾಗಲಿದೆ.