ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮಂಗಳವಾರ ಅನಾವರಣಗೊಳಿಸಿದರು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮಂಗಳವಾರ ಅನಾವರಣಗೊಳಿಸಿದರು.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯು ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿದೆ.
ಈ ಪ್ರತಿಮೆಯು ಭದ್ರತಾ ಪಡೆಗಳಿಗೆ ಸದಾ ಸ್ಫೂರ್ತಿ ನೀಡುತ್ತದೆ ಎಂದು ಮಹರಾಷ್ಟ್ರದ ಮುಖ್ಯಮಂತ್ರಿ ಶಿಂದೆ ಹೇಳಿದರು.
'ಮಹಾರಾಷ್ಟ್ರ ಮತ್ತು ಜಮ್ಮು- ಕಾಶ್ಮೀರದ ನಡುವಿನ ಸಂಬಂಧ ಬಹಳ ಹಳೆಯದಾಗಿದ್ದು, ಇನ್ನಷ್ಟು ಬಲಿಷ್ಠಗೊಳ್ಳಬೇಕಿದೆ' ಎಂದು ಅವರು ತಿಳಿಸಿದರು.