ತಮಿಳುನಾಡು: ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. ಗುರುವಾರ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ತಮಿಳುನಾಡು: ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. ಗುರುವಾರ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಪ್ರಾದೇಶಿಕ ಹವಾಮಾನ ಕೇಂದ್ರದ (RMC) ಪ್ರಕಾರ, ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಉತ್ತರ ಅಂಡಮಾನ್ ಸಮುದ್ರದ ಮೇಲೆ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ತಮಿಳುನಾಡಿನ ಹಲವು ಭಾಗಗಳು ಜಲಾವೃತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜಲಾವೃತ ಪ್ರದೇಶಗಳ ವಿಡಿಯೊಗಳು ಹರಿದಾಡುತ್ತಿವೆ.