ಹೈದಾರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈಎಸ್ ಶರ್ಮಿಳಾ ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ವೈಎಸ್‌ಆರ್ ತೆಲಂಗಾಣ ಪಕ್ಷ
0
ನವೆಂಬರ್ 07, 2023
Tags
ಹೈದಾರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈಎಸ್ ಶರ್ಮಿಳಾ ಘೋಷಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಹಾಗೂ ಕೆ. ಚಂದ್ರಶೇಖರ್ ರಾವ್ ಕಳೆದ ಒಂಬತ್ತು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದು, ಇದೇ ಕಾರಣಕ್ಕೆ ಕೆಸಿಆರ್ ಮತ್ತೆ ಅಧಿಕಾರಕ್ಕೆ ಬರಬಾರದು' ಎಂದಿದ್ದಾರೆ.
' ರಾಜ್ಯದ ಸುಮಾರು 55 ವಿಧಾನಸಭಾ ಕ್ಷೇತ್ರ ಪೈಕಿ 20ಕ್ಕೂ ಹೆಚ್ಚು ಕ್ಷೇತ್ರಗಳ ಮೇಲೆ ವೈಎಸ್‌ಆರ್ ಪಕ್ಷವು ಪರಿಣಾಮ ಬೀರಲಿದ್ದು. ಒಂದು ವೇಳೆ ನಾವು ಸ್ಪರ್ಧಿಸಿದರೆ ಕಾಂಗ್ರೆಸ್ ಸೋಲಲು ಕಾರಣವಾಗುತ್ತದೆ. ಇದು ಕೆಸಿಆರ್ ಪಕ್ಷಕ್ಕೆ ಅನುಕೂಲವಾಗಬಹುದು ಎಂಬ ಕಾರಣದಿಂದಾಗಿ ಬೆಂಬಲ ಸೂಚಿಸುತ್ತೀದ್ದೇವೆ' ಎಂದು ಶರ್ಮಿಳಾ ಹೇಳಿದ್ದಾರೆ.
119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.