ಮಂಜೇಶ್ವರ : ಭಾರತದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರುರವರ ಜನ್ಮದಿನಾಚರಣೆ ಮಕ್ಕಳ ದಿನಾಚರಣೆಯನ್ನು ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿಯವರು ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಉಪಸ್ಥಿತರಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷÀ ಸತೀಶ್ ಎಲಿಯಾಣ, ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಶತಮಾನೋತ್ಸವದ ಶಿಸ್ತು ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷÀ ಬಾಲಕೃಷ್ಣ ಶೆಟ್ಟಿ ಪೊಯ್ಯೆಲು, ಸನ್ಮಾನ ಸಮಿತಿಯ ಅಧ್ಯಕ್ಷ ನಾರಾಯಣ ನಾೈಕ್ ನಡುಹಿತ್ಲು, ಶತಮಾನೋತ್ಸವ ಸಮಿತಿ ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಹರಿರಾಮ ಕುಳೂರು, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರ ಕಲ್ಕಾರ್ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನಮೇಳ ಹಾಗೂ ಕಲೋತ್ಸವದಲ್ಲಿ ಮಿಂಚಿದ ಶಾಲಾ ಪ್ರತಿಭೆಗಳನ್ನು ಸ್ಮರಣೆಕೆ ನೀಡಿ ಅಭಿನಂದಿಸಲಾಯಿತು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕಿಯರಾದ ನಯನ ಎಂ ಹಾಗೂ ಶ್ವೇತಾ ನಿರ್ವಹಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಕಾರ್ಯಕ್ರಮ ಸಂಘಟಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.