ಎರ್ನಾಕುಳಂ: ರಾಜ್ಯದ ಖಾಸಗೀ ಬಸ್‍ಗಳಲ್ಲಿ ಕ್ಯಾಮೆರಾ ಅಳವಡಿಸುವ ಕೇರಳ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕೇರಳ ಬಸ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಿ ಆದೇಶಕ್ಕೆ ತಡೆ ನೀಡಿದೆ.
ಬಸ್‍ಗಳಲ್ಲಿ ಕ್ಯಾಮೆರಾ ಅಳವಡಿಸುವ ಸರ್ಕಾರದ ಆದೇಶದ ವಿರುದ್ಧ ಬಸ್ ಮಾಲೀಕರು ಪ್ರತಿಭಟನೆ ನಡೆಸಿದ್ದರು. ಬಸ್ ಗಳಲ್ಲಿ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಬೇಕಾದರೆ ನೀಡಿರುವ ಸಮಯವನ್ನು ವಿಸ್ತರಿಸಬೇಕು ಎಂದು ಬಸ್ ಮಾಲೀಕರು ಆಗ್ರಹಿಸಿದರು. ಹಲವಾರು ಬಸ್ ಅಪಘಾತಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಬಸ್‍ಗಳ ಒಳಗೆ ಮತ್ತು ಹೊರಗೆ ಕ್ಯಾಮೆರಾಗಳನ್ನು ಅಳವಡಿಸಲು ಮುಂದಾಗಿದೆ.