ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಕಲಾ ಸಂಘದÀ ಲಾಂಛನ ಬಿಡುಗಡೆ ಮತ್ತು ಯಕ್ಷಗಾನ ಬಯಲಾಟ ಕಾರ್ಯಕ್ರಮ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಶ್ರೀಮದ್ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮತ್ತು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳು ದಿವ್ಯಉಪಸ್ಥಿತರಿದ್ದು, ಜಂಟಿಯಾಗಿ ಸಂಘದ ಲಾಂಛನವನ್ನು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ವಿಕಾಸದ ಕಲಾ ಸಾಂಸ್ಕøತಿಕ ಕಾರ್ಯಚಟುವಟಿಕೆಯು ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.
ವಿದ್ಯಾವರ್ಧಕ ವಿದ್ಯಾಸಂಸ್ಥೆಗೆ ಹತ್ತು ಕಂಪ್ಯೂಟರ್ ಗಳನ್ನು ತಮ್ಮ ಸಂಸ್ಥೆಯಿಂದ ಕೊಡಿಸಿದ ಅರವಿಂದ ಹೊಳ್ಳರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹನುಮಗಿರಿ ಮೇಳದವರಿಂದ ನೂತನ ಪೌರಾಣಿಕ ಪ್ರಸಂಗ 'ಇಂದ್ರಪ್ರಸ್ಥ' ಯಕ್ಷಗಾನ ಬಯಲಾಟ ಜರಗಿತು. ಕಾರ್ಯಕ್ರಮದಲ್ಲಿ ವಿದ್ಯಾ ವರ್ಧಕ ಕಲಾ ಸಂಘದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಂಘದ ಸದಸ್ಯ ರಾಜಾರಾಮ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.