ಕೊಚ್ಚಿ: ಕೇರಳದ ಎರ್ನಾಕುಲಂನ ಮುವಾಟ್ಟುಪುಳದ ಕಂಪಾನಿಪಾಡಿಯಲ್ಲಿ ಭಾನುವಾರ ಮಧ್ಯಾಹ್ನ ಟಿಂಬರ್ ಯಾರ್ಡ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ.
ಮೃತರನ್ನು ಅಸ್ಸಾಂ ಮೂಲದ ಮೊಹಂತೋ ಮತ್ತು ದೆಪ್ಪಾಶಂಕರ್ ಬಸುಮ್ಮ ಎಂದು ಗುರುತಿಸಲಾಗಿದೆ.
ಸಂಜೆ 4 ಗಂಟೆ ಸುಮಾರಿಗೆ ಇಬ್ಬರ ಮೃತದೇಹಗಳನ್ನು ಅವರ ಸಹೋದ್ಯೋಗಿಗಳು ನೋಡಿದ್ದಾರೆ. ಇಬ್ಬರೂ ಒಂದೇ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯ ನಂತರ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ವ್ಯಕ್ತಿ ಮತ್ತು ಅವರ ಆಪ್ತ ಸ್ನೇಹಿತ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದ್ದು, ನಿನ್ನೆ ರಾತ್ರಿಯೇ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.