ನವದೆಹಲಿ: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಗಣಿತ ವಿಷಯದಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಒಂದು ವರ್ಷದ ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆಯುವುದಕ್ಕೆ ಅನುವಾಗುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ನಾಲ್ಕು ವಿಭಾಗಗಳಲ್ಲಿ ನಾಲ್ಕು ವರ್ಷದ ಪದವಿ ಪಡೆದವರು, ಮೂರು ವರ್ಷದ ಪದವಿ ಹಾಗೂ ಎರಡು ವರ್ಷದ ಸ್ನಾತಕೋತ್ತರ ಪದವಿ ಪಡೆದವರು ಅಥವಾ ಐದು ವರ್ಷಗಳ ಸಂಯೋಜಿತ ಪದವಿ ಶಿಕ್ಷಣ ಪೂರ್ಣಗೊಳಿಸಿದವರು ನೇರವಾಗಿ ಎಂ.ಇ ಹಾಗೂ ಎಂ.ಟೆಕ್ ಪ್ರವೇಶಾತಿಗೆ ಅರ್ಹತೆ ಪಡೆಯಲಿದ್ದಾರೆ ಎಂದು ತಿಳಿಸಿದೆ.
ನವೆಂಬರ್ 3ರಂದು ನಡೆದ ಆಯೋಗದ ಸಭೆಯಲ್ಲಿ ಈ ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕರಡು ಪಠ್ಯಕ್ರಮ ಹಾಗೂ ವಿಶ್ವಾಸಪೂರ್ಣವಾದ ಚೌಕಟ್ಟನ್ನು ರೂಪಿಸಲಾಗಿದೆ. ಈ ವಾರದೊಳಗೆ ಇದನ್ನು ಬಿಡುಗಡೆಗೊಳಿಸಲಾಗುತ್ತದೆ. ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಆಯೋಗವು ಅಧಿಕೃತವಾಗಿ ಒಪ್ಪಿಗೆ ನೀಡಲಿದೆ.
'ಭಾರತೀಯ ಶಿಕ್ಷಣದಲ್ಲಿ ಮೊದಲ ಬಾರಿಗೆ ಇಂತಹ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದು ಜಗತ್ತನ್ನು ಅರ್ಥೈಸಿಕೊಳ್ಳಲು ನೆರವಾಗಲಿದೆ. ಜತೆಗೆ, ಈ ಬಹುಶಿಸ್ತೀಯ ಶಿಕ್ಷಣವು ವಿಮರ್ಶಾತ್ಮಕ ಚಿಂತನೆ ಹಾಗೂ ಕೌಶಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ನೆರವಾಗಲಿದೆ' ಎಂದು ಆಯೋಗದ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ' ತಿಳಿಸಿದರು.