ಕಾಸರಗೋಡು: ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕಕ್ಕೆ ತೆಕ್ಕೇಕೆರೆ ಶಂಕರನಾರಾಯಣ ಭಟ್ ಅವರನ್ನು ಪುನರಾಯ್ಕೆ ಮಾಡಲಾಗಿದೆ. ರಾಜ್ಯ ಸಮಿತಿಯ 41ನೆಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಗಿದೆ. ಡಾ. ಎ.ವಿ. ಪ್ರಸನ್ನ ಅವರು ನೂತನ ರಾಜ್ಯಾಧ್ಯಕ್ಷರಾದ ನಂತರ ನಡೆದ ಹೊಸ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರತೀ ಜಿಲ್ಲೆಗಳಿಗೆ ಪ್ರಾತಿನಿಧ್ಯ ಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಟಿ. ಶಂಕರ ನಾರಾಯಣ ಭಟ್ಟರನ್ನೇ ಮುಂದಿನ ಮೂರು ವರ್ಷಗಳಿಗೆ (2023-26) ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು.