ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದಿಂದಾಗಿ ಗಾಳಿಯ ಗುಣಮಟ್ಟ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ನಡೆಸಿ, ಕೃತಕ ಮಳೆ ಸುರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ತಿಳಿಸಿದ್ದಾರೆ.

ಐಐಟಿ ಕಾನ್ಪುರ ವಿಜ್ಞಾನಿಗಳೊಂದಿಗೆ ಸಚಿವರು ಸಭೆ ನಡೆಸಿದ್ದಾರೆ. ವಿಜ್ಞಾನಿಗಳು, ವಾತಾವರಣದಲ್ಲಿ ಮೋಡ ಅಥವಾ ತೇವಾಂಶ ಇದ್ದರೆ ಮಾತ್ರ ಮೋಡ ಬಿತ್ತನೆ ಸಾಧ್ಯವಾಗುತ್ತದೆ ಎಂದಿದ್ದಾರೆ.
' ನವೆಂಬರ್ 20-21ರ ಹೊತ್ತಿಗೆ ವಾತಾವರಣದಲ್ಲಿ ತೇವಾಂಶ ಬರಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ. ಗುರುವಾರದೊಳಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ನಾವು ವಿಜ್ಞಾನಿಗಳನ್ನು ಕೇಳಿದ್ದೇವೆ, ಅದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು' ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.
ಕೃತಕ ಮಳೆಯ ಪ್ರಯತ್ನವನ್ನು ಈಗಾಗಲೇ ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ನಡೆಸಲಾಗಿದೆ. ಜಾಗತಿಕವಾಗಿ ಇದರ ಬಗ್ಗೆ ಅಧ್ಯಯನ ನಡೆದಿದೆ. ಅದಕ್ಕೆ ಮುಖ್ಯವಾಗಿ ಬೇಕಾಗಿರುವುದು ಮೋಡ ಅಥವಾ ತೇವಾಂಶ. ಭಾರತದಲ್ಲಿ ಕೃತಕ ಮಳೆಯ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಆದರೆ ಇಲ್ಲಿಯವರೆಗೆ ಗಮನಾರ್ಹ ಪ್ರಗತಿ ಸಾಧಿಸಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಅವರು ತಿಳಿಸಿದ್ದಾರೆ.