ಕಾಸರಗೋಡು: ಭಾರತೀಯ ವಕೀಲರ ಪರಿಷತ್ತಿನ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ದಿನವನ್ನು ಆಚರಿಸಲಾಯಿತು. ವಿದ್ಯಾನಗರ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ನಿವೃತ್ತ ನ್ಯಾಯಾಧೀಶ ಎ. ಶಂಕರನ್ ನಾಯರ್ ಉದ್ಘಾಟಿಸಿರು.
ಈ ಸಂದರ್ಭ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ಎಂಬ ವಿಷಯದಲ್ಲಿ ತರಗತಿ ನಡೆಸಿದರು. ವಕೀಲ ಎ. ಸಿ. ಅಶೋಕ್‍ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಉಪಾಧ್ಯಕ್ಷ ವಕೀಲ ಬಿ. ರವೀಂದ್ರನ್, ರಾಜ್ಯ ಸಮಿತಿ ಸದಸ್ಯರಾದ ಕೆ. ಕರುಣಾಕರನ್ ನಂಬಿಯಾರ್ ಉಪಸ್ಥಿತರಿದ್ದರು. ಭಾರತೀಯ ವಕೀಲರ ಪರಿಷತ್ ಜಿಲ್ಲಾ ಕಾರ್ಯದರ್ಶಿ ಪಿ. ಮುರಳೀಧರನ್ ಸ್ವಾಗತಿಸಿದರು. ಹೊಜದುರ್ಗ ಘಟಕದ ಅಧ್ಯಕ್ಷ ಕೆ.ಜಿ. ಅನಿಲ್ ವಂದಿಸಿದರು.