ಕೊಲ್ಕತ್ತ: 'ಒಂದು ಲಕ್ಷ ಜನರು ಏಕಕಾಲದಲ್ಲಿ ಭಗವದ್ಗೀತೆಯನ್ನು ಪಠಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳಲಿದ್ದಾರೆಂದು ಪಶ್ವಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಸೋಮವಾರ ಹೇಳಿದ್ದಾರೆ.

ಡಿಸೆಂಬರ್ 24ರಂದು ಕೊಲ್ಕತ್ತ ನಗರದ ಬ್ರಿಗೇಡ್ ಪರೇಡ್ ಮೈದಾನದಲ್ಲಿ 'ಒಂದು ಲಕ್ಷ ಗೀತಾ ಪಠಣ' (Ek Lakh Gita Path) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
'ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅವರೂ ಸಹ ಈ ಸಮಾರಂಭದಲ್ಲಿ ಭಾಗಿಯಾಗಲು ಸಮ್ಮತಿ ನೀಡಿದ್ದಾರೆ. ಆ ದಿನ ಒಂದು ಲಕ್ಷ ಜನ ಏಕಕಾಲದಲ್ಲಿ ಭಗವದ್ಗೀತೆ ಪಠಣೆ ಮಾಡಲಿದ್ದಾರೆ' ಎಂದು ಸುಕಾಂತ ಹೇಳಿದ್ದಾರೆ.
ಈ ಕಾರ್ಯಕ್ರಮವು ರಾಜಕೀಯ ಪ್ರೇರಿತವಲ್ಲ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಪಾಲ ಸಿ.ವಿ ಆನಂದ ಬೋಸ್ ಹಾಗೂ ರಾಜ್ಯದ ಪ್ರಮುಖ ವ್ಯಕ್ತಿಗಳಿಗೂ ಆಹ್ವಾನವನ್ನು ನೀಡಲಾಗುವುದು ಎಂದರು.
2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್( ಟಿಎಂಸಿ) ವಕ್ತಾರ ಕುನಾಲ್ ಘೋಷ್ ಆರೋಪಿಸಿದ್ದಾರೆ.
'ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆ ಗುರಿಯಾಗಿಸಿಕೊಂಡು ರಾಜ್ಯಕ್ಕೆ ಪದೇ ಪದೇ ಬರುವುದು ಸಾಮಾನ್ಯ. ಆದರೆ ಈ ಬೆಳವಣಿಗೆಗಳಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂದು ಕುನಾಲ್ ಹೇಳಿದ್ದಾರೆ.