ತಿರುವನಂತಪುರಂ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ದೂರವಾಣಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ಬುಧವಾರ ಸಂಜೆ ನಡೆದಿದೆ. ಪೋಲೀಸ್ ಕೇಂದ್ರ ಕಚೇರಿಗೆ ದೂರವಾಣಿ ಕರೆ ಮಾಡಿ ಬೆದರಿಸಿ ನಿಂದಿಸಲಾಗಿದೆ.
ಘಟನೆ ಸಂಬಂಧ ಮ್ಯೂಸಿಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರದ ತನಿಖೆಯಲ್ಲಿ 12ರ ಹರೆಯದ ಶಾಲಾ ವಿದ್ಯಾರ್ಥಿನಿ ಜೀವ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ. ಎರ್ನಾಕುಳಂ ಮೂಲದ ಬಾಲಕಿಯೆಂದು ತಿಳಿದುಬಂದಿದ್ದು, ತನಿಖೆ ಪ್ರಗತಿಯಲ್ಲಿದೆ.