ಮಂಜೇಶ್ವರ: ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಈ ವರ್ಷ ಶತಮಾನೋತ್ಸವವನ್ನು ಆಚರಿಸುತ್ತಿದ್ದು ಪ್ರಯುಕ್ತ ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಹಾಗೂ ರಘುರಾಮ್ ಕೆ ಶೆಟ್ಟಿ ಕುಳೂರು ಕನ್ಯಾನರವರಿಂದ ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ವತಿಯಿಂದ ಶಾಲಾ ವಾಹನದ ಕೊಡುಗೆಯು ಹಸ್ತಾಂತರವು ಮಂಗಳವಾರ ಶಾಲೆಯಲ್ಲಿ ನಡೆಯಿತು.
ಸಮಾಜದಲ್ಲಿ ಹಲವಾರು ಕೊಡುಗೆಗಳನ್ನು ನೀಡಿ ಕೊಡುಗೈ ದಾನಿ ಎಂದೇ ಗುರುತಿಸಿಕೊಂಡಿರುವ ಸದಾಶಿವ ಕೆ ಶೆಟ್ಟಿ ಹಾಗೂ ಅವರ ಸಹೋದರ ರಘುರಾಮ್ ಕೆ ಶೆಟ್ಟಿ ಕುಳೂರು ಕನ್ಯಾನರವರು ತಮ್ಮ ಸಂಸ್ಥೆಯಾದ ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ವತಿಯಿಂದ ತಾವು ಕಲಿತಂತಹ ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹಲವಾರು ಕೊಡುಗೆಗಳ ಜೊತೆಗೆ ಶತಮಾನೋತ್ಸವದ ಸವಿನೆನಪಿಗಾಗಿ ಶಾಲಾ ವಾಹನದ ಕೊಡುಗೆಯನ್ನು ನೀಡಿದ್ದು ಅದರ ಹಸ್ತಾಂತರವು ಶಾಲೆಯಲ್ಲಿ ನಡೆಯಿತು. ನೂತನ ಶಾಲಾ ವಾಹನದ ಕೀಲಿಕೈಯನ್ನು ಅವರ ಮಾತೃಶ್ರೀಯಾದ ಲೀಲಾವತಿ ಪಕೀರ ಶೆಟ್ಟಿ ಕುಳೂರು ಕನ್ಯಾನರವರು ಶಾಲಾ ಮುಖ್ಯ ಶಿಕ್ಷಕಿ ಮಾಲತಿ ರವರಿಗೆ ಹಸ್ತಾಂತರಿಸುವ ಮೂಲಕ ನೆರವೇರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷ ಸುಂದರಿ ಆರ್ ಶೆಟ್ಟಿ, ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಹಾಜಿ ಕಂಚಿಲ, ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರ ಸಹೋದರರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಶತಮಾನೋತ್ಸವದ ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೆÇಯ್ಯೆಲು, ಶತಮಾನೋತ್ಸವದ ಸನ್ಮಾನ ಸಮಿತಿಯ ಅಧ್ಯಕ್ಷ ನಾರಾಯಣ ನಾೈಕ್ ನಡುಹಿತ್ಲು, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಜಯರಾಜ ಶೆಟ್ಟಿ ಚಾರ್ಲ, ಕಾರ್ಯಕ್ರಮ ಸಮಿತಿ ಅಧ್ಯಕ್ಷÀ ಹರಿರಾಮ ಕುಳೂರು, ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರ ಕಲ್ಕಾರ್, ಶತಮಾನೋತ್ಸವ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.