ಪೆರ್ಲ: ಪೆರ್ಲ ಸೇವಾ ಸಹಕಾರಿ ಬ್ಯಾಂಕಿನ ಪ್ರಾಂಗಣದಲ್ಲಿ ನಬಾರ್ಡ್ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿರುವ ರಸಗೊಬ್ಬರ ದಾಸ್ತಾನು ಕೇಂದ್ರದ ಉದ್ಘಾಟನೆ ನ. 4ರಂದು ಮಧ್ಯಾಹ್ನ 3ಕ್ಕೆ ಜರುಗಲಿದೆ. ಕೇಂದ್ರ ಕೃಷಿ ಮತ್ತು ಕೃಷಿಕ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರವನ್ನು ಉದ್ಘಾಟಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸುವರು.
ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಕೃಷಿಯಂತ್ರೋಪಕರಣಗಳ ಮಾರಾಟದ ಉದ್ಘಾಟನೆ ನೆರವೇರಿಸುವರು. ಸಹಕಾರಿ ಸಂಘಗಳ ಜಂಟಿ ನಿಬಂಧಕಿ ಲಸಿತಾ ಕೆ. ಉತ್ಪಾದನಾ ಸಾಲಪತ್ರ ವಿತರಿಸುವರು.
ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಎಸ್ ಸೋಮಶೇಖರ್, ಉಪಾಧ್ಯಕ್ಷೆ ಡಾ. ಜಹನಾಸ್ ಹಂಸಾರ್, ಕಾಸರಗೋಡು ಜಿಪಂ ಸದಸ್ಯ ನಾರಾಯಣ ನಾಯ್ಕ್ ಅಡ್ಕಸ್ಥಳ, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯರಾದ ಬಟ್ಟು ಶೆಟ್ಟಿ ಕಾಟುಕುಕ್ಕೆ, ಅನಿಲ್ ಕುಮಾರ್ ಕೆ.ಪಿ, ಸಹಕಾರ ಭಾರತೀ ಜಿಲ್ಲಾಧ್ಯಕ್ಷ ಗಣೇಶ್ ಪಾರೆಕಟ್ಟ, ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.