ನವದೆಹಲಿ: ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ಯಾವುದೇ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ ಎಂದು ಬಿಲಿಯನೇರ್ ಗೌತಮ್ ಅದಾನಿ ಅವರ ದಾನಿ ಗ್ರೂಪ್ ಸೋಮವಾರ ಸ್ಪಷ್ಟಪಡಿಸಿದೆ.
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಂಪನಿಯಲ್ಲಿ ದಾನಿ ಗ್ರೂಪ್ ಯಾವುದೇ ಪಾಲನ್ನು ಹೊಂದಿಲ್ಲ ಅಥವಾ ಹೊಂದುವುದಿಲ್ಲ ಅದಾನಿ ಸಮೂಹದ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಅದಾನಿ ಸಮೂಹ ಅಥವಾ ಅದರ ಯಾವುದೇ ಅಂಗಸಂಸ್ಥೆಗಳು ಸುರಂಗ ನಿರ್ಮಾಣದಲ್ಲಿ ಯಾವುದೇ ರೀತಿಯ ನೇರ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ" ಎಂದು ಅದಾನಿ ಗ್ರೂಪ್ ಹೇಳಿದೆ.
ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸುರಂಗದ ನಿರ್ಮಾಣ ಕಾರ್ಯವನ್ನು ನೋಡಿಕೊಳ್ಳುತ್ತಿದೆ. ಸುರಂಗ ನಿರ್ಮಾಣದಲ್ಲಿ ತೊಡಗಿರುವ ಆ ಕಂಪನಿಯಲ್ಲಿ ನಾವು ಯಾವುದೇ ಷೇರುಗಳನ್ನು ಹೊಂದಿಲ್ಲ ಅಥವಾ ಹೊಂದುವುದಿಲ್ಲ ಎಂದು ಅದಾನಿ ಗ್ರೂಪ್ ಸ್ಪಷ್ಪಪಡಿಸಿದೆ.