ಬೆಂಗಳೂರು: ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ನಲ್ಲಿ ಆಸ್ಟ್ರೇಲಿಯಾ ಎದುರು ಭಾರತ ಸೋತು ವಿಶ್ವಕಪ್ ಕೈತಪ್ಪಿ ಹೋಗಿದೆ. ಈ ಅಂತಿಮ ಹಣಾಹಣಿ ವೇಳೆ ಕ್ರೀಡಾಂಗಣಕ್ಕೆ ಹೋಗಿದ್ದ ಪ್ರಧಾನಿ ಮೋದಿ ಅವರ ನಡೆಯೊಂದು ಈಗ ಮೆಚ್ಚುಗೆಗೆ ಪಾತ್ರವಾಗಿದೆ.

ಡ್ರೆಸ್ಸಿಂಗ್ ರೂಮ್‌ಗೆ ಬಂದು ಪ್ರಧಾನಿ ಮೋದಿ ತೋರಿದ ಕಾಳಜಿ ಬಗ್ಗೆ ಮೊಹಮದ್ ಶಫಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಶಮಿ ಹೇಳಿದ್ದಾರೆ.
ಅದರಲ್ಲೂ ವಿಶೇಷವಾಗಿ ಡ್ರೆಸ್ಸಿಂಗ್ ರೂಮ್‌ಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಾವು ಮತ್ತೆ ಪುಟಿದೇಳುತ್ತೇವೆ ಎಂಬುದಾಗಿ ಶಮಿ ಹೇಳಿಕೊಂಡಿದ್ದಾರೆ. ಜತೆಗೆ ಮೋದಿ ತಮ್ಮನ್ನು ತಬ್ಬಿ ಸಂತೈಸುತ್ತಿರುವ ಫೋಟೋವೊಂದನ್ನೂ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಬಹಳಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈಗ ವೈರಲ್ ಆಗಲಾರಂಭಿಸಿದೆ.
ಈ ಫೋಟೋಗೆ ಪ್ರತಿಕ್ರಿಯಿಸುತ್ತಿರುವ ಕೆಲವರು ಚಂದ್ರಯಾನ-2 ವಿಫಲಗೊಂಡ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರನ್ನು ಪ್ರಧಾನಿ ಮೋದಿ ಸಂತೈಸಿದ್ದ ಫೋಟೋ ಹಂಚಿಕೊಂಡು ಅಂದಿನ ಕ್ಷಣಗಳನ್ನು ಸ್ಮರಿಸಿಕೊಂಡಿದ್ದಾರೆ. ಆ ದಿನ ಶಿವನ್ಗೆ ಮೋದಿ ಸಂತೈಸಿದ್ದ ಫೋಟೋ ಕೂಡ ವೈರಲ್ ಆಗಿತ್ತು. ನಂತರ ಚಂದ್ರಯಾನ-3 ಯಶಸ್ವಿಯಾಗಿತ್ತು.