ಮುಳ್ಳೇರಿಯ: ಪೆರಿಯ ಆಲಕ್ಕೋಡು ಗೋಕುಲಂ ಗೋಶಾಲೆಯಲ್ಲಿ ನಡೆದ ದೀಪಾವಳಿ ಸಂಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಂಗೀತ ಕಲಾವಿದ ವಿದ್ವಾನ್.ವೆಳ್ಳಿಕ್ಕೋತ್ ವಿಷ್ಣು ಭಟ್ ಅವರಿಗೆ ಗುರುರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.
ಶ್ರೀರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ತಾಮ್ರಫಲಕದೊಂದಿಗೆ ಪ್ರಶಸ್ತಿಯನ್ನು ನೀಡಿ ಆಶೀರ್ವದಿಸಿದರು. ಹಿರಿಯ ಕಲಾವಿದೆ ಡಾ. ಪದ್ಮಾಸುಬ್ರಹ್ಮಣ್ಯಂ, ಪರಂಪರಾ ವಿದ್ಯಾಪೀಠದ ಆಚಾರ್ಯ ವಿಷ್ಣುಪ್ರಸಾದ ಹೆಬ್ಬಾರ್ ಮತ್ತು ಡಾ. ನಾಗರತ್ನ ಹೆಬ್ಬಾರ್ ಉಪಸ್ಥಿತರಿದ್ದರು.