ಮುಂಬೈ: 26/11ರ ಭಯೋತ್ಪಾದಕರ ದಾಳಿಯ 15ನೇ ವರ್ಷಾಚರಣೆ ದಿನವಾದ ಭಾನುವಾರ ಮೂವರು ಉಗ್ರರು ನಗರವನ್ನು ಪ್ರವೇಶಿಸಿದ್ದಾರೆ ಎಂದು ಮುಂಬೈ ಪೊಲೀಸರಿಗೆ ಹುಸಿ ಕರೆ ಮಾಡಿದ್ದ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: 26/11ರ ಭಯೋತ್ಪಾದಕರ ದಾಳಿಯ 15ನೇ ವರ್ಷಾಚರಣೆ ದಿನವಾದ ಭಾನುವಾರ ಮೂವರು ಉಗ್ರರು ನಗರವನ್ನು ಪ್ರವೇಶಿಸಿದ್ದಾರೆ ಎಂದು ಮುಂಬೈ ಪೊಲೀಸರಿಗೆ ಹುಸಿ ಕರೆ ಮಾಡಿದ್ದ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಲಕ್ಷ್ಮಣ ನಾನಾವರೆ, ಕುಡಿದ ಮತ್ತಿನಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಈ ರೀತಿ ಕರೆ ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
'ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ಆರೋಪಿಯು, ಇಬ್ಬರಿಂದ ಮೂವರು ಭಯೋತ್ಪಾದಕರು ಮುಂಬೈ ನಗರವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದ. ಇದರಿಂದಾಗಿ ನಾವು ತಕ್ಷಣವೇ ಕಾರ್ಯಾಚರಣೆಗೆ ಮುಂದಾದೆವು. ಆದರೆ, ಇದು ಸುಳ್ಳು ಎಂಬುದು ಗೊತ್ತಾಯಿತು. ಆ ಬಳಿಕ ಕರೆ ಮಾಡಿದ್ದ ವ್ಯಕ್ತಿ ಇರುವ ಸ್ಥಳವನ್ನು ಪತ್ತೆ ಹಚ್ಚಿ, ಮನಖುದ್ ಉಪನಗರದಲ್ಲಿ ಆರೋಪಿಯನ್ನು ಭಾನುವಾರ ಸಂಜೆಯೇ ಬಂಧಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.