ಜೈಪುರ: ಕಾಂಗ್ರೆಸ್‌ನಿಂದಾಗಿ ರಾಜಕೀಯದಲ್ಲಿ ನಂಬಿಕೆಯ ಸಮಸ್ಯೆ ತೀವ್ರಗೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.
ಜೈಪುರ: ಕಾಂಗ್ರೆಸ್‌ನಿಂದಾಗಿ ರಾಜಕೀಯದಲ್ಲಿ ನಂಬಿಕೆಯ ಸಮಸ್ಯೆ ತೀವ್ರಗೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.
ರಾಜಸ್ಥಾನದ ರಾಜಸಮಂದ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ರಾಜಕೀಯ ನಾಯಕರ ಮಾತು ಮತ್ತು ನಡೆಗಳಲ್ಲಿನ ವ್ಯತ್ಯಾಸದಿಂದಾಗಿ, ಭಾರತದ ರಾಜಕೀಯ ಮತ್ತು ನಾಯಕರ ಮೇಲಿನ ಸಾರ್ವಜನಿಕರ ನಂಬಿಕೆ ಕ್ರಮೇಣ ಕುಸಿಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೇಶದ ರಾಜಕೀಯದಲ್ಲಿನ ನಂಬಿಕೆಯ ಬಿಕ್ಕಟ್ಟನ್ನು ಸವಾಲಾಗಿ ತೆಗೆದುಕೊಂಡಿದೆ. 2018ರ ವಿಧಾನಸಭಾ ಚುನಾವಣೆಗೂ ಮುನ್ನ ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆಯೇ ಎಂಬುದು ಎಲ್ಲರಿಗೂ ಗೊತ್ತಿದೆ. ಯಾವುದೇ ವ್ಯಕ್ತಿಯಾಗಲಿ, ಸಂಘಟನೆಯಾಗಲಿ ಪ್ರತಿಯೊಬ್ಬರು ತಾವು ನೀಡುವ ಭರವಸೆಗಳನ್ನು ಗೌರವಿಸಬೇಕು ಮತ್ತು ಅವರ ಮಾತು ಹಾಗೂ ನಡತೆಯಲ್ಲಿ ವ್ಯತ್ಯಾಸವಾಗಬಾರದು ಎಂದು ಸಿಂಗ್ ಹೇಳಿದರು.
ರಾಜಸ್ಥಾನ ವಿಧಾನಸಭೆ ಚುನಾವಣೆಯು ನವೆಂಬರ್ 25 ರಂದು ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.