ನವದೆಹಲಿ (PTI): ಸೂಪರ್ ಟೆಕ್ ರಿಯಲ್ ಎಸ್ಟೇಟ್ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಗುರುಗ್ರಾಮದಲ್ಲಿರುವ ಡಿಎಲ್‌ಎಫ್ ಕಂಪನಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಶೋಧ ಕಾರ್ಯ ನಡೆಸಿದೆ.

ಶೋಧ ಕಾರ್ಯಾಚರಣೆಯ ವೇಳೆ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತು ಡಿಎಲ್‌ಎಫ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಂಪನಿಗೆ ಸಂಬಂಧಿಸಿ ಶೋಧ ಕಾರ್ಯ ನಡೆದಿಲ್ಲ. ಕೆಲವು ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸೂಪರ್‌ಟೆಕ್‌ನ ಅಧ್ಯಕ್ಷ ಮತ್ತು ಮಾಲೀಕ ಆರ್.ಕೆ.ಅರೋರಾ ಅವರನ್ನು ಜೂನ್‌ನಲ್ಲಿ ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸೂಪರ್‌ಟೆಕ್ ಕಂಪನಿ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ವಿವಿಧ ರಾಜ್ಯಗಳಲ್ಲಿ ಕಂಪನಿಯ ವಿರುದ್ಧ 26 ಎಫ್‌ಐಆರ್‌ಗಳು ದಾಖಲಾಗಿದ್ದವು.