ಬದಿಯಡ್ಕ: ಇತ್ತೀಚೆಗೆ ಜಿ.ಜೆ.ಬಿ.ಎಸ್ ಪೇರಾಲ್ ಶಾಲೆಯಲ್ಲಿ ಜರಗಿದ 62 ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 63 ಅಂಕಗಳನ್ನು ಪಡೆದು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯು ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದೆ. ವಿವಿಧ ಸ್ಪರ್ಧೆಗಳಲ್ಲಿ ಸರ್ವಾಂಗೀಣ ಸಾಧನೆಯನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ರಕ್ಷಕ ಶಿಕ್ಷಕ ಸಂಘ ಅಭಿನಂದಿಸಿದೆ.