ಕಾಸರಗೋಡು: ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆಯ ನಿಯಂತ್ರಣದಲ್ಲಿರುವ ವೆಳ್ಳಾಚ್ಚಾಲ್ ಎಂ.ಆರ್.ಎಸ್‍ನ ಹದಿಹರೆಯದ ವಿದ್ಯಾರ್ಥಿಗಳಲ್ಲಿರುವ ಸಮಸ್ಯೆಗಳನ್ನು ಗುರುತಿಸಲು, ಅಗತ್ಯ ಸಹಾಯ ಮತ್ತು ಮಾರ್ಗದರ್ಶನ ನೀಡಲು ಸೈಕಾಲಜಿ ಯಾ ಸೋಶಿಯಲ್ ವರ್ಕ್ ಅಥವಾ ಸೋಶಿಯಾಲಜಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕೌನ್ಸೆಲಿಂಗ್‍ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ 20,000 ರೂಪಾಯಿ ವೇತನ ನೀಡಲಾಗುವುದು. ನೇಮಕಾತಿ ಅವಧಿಯು ಮಾರ್ಚ್ 2024 ರವರೆಗೆ. ಅರ್ಹ ಅಭ್ಯರ್ಥಿಗಳು ನೇಮಕಾತಿಗಾಗಿ ನವೆಂಬರ್ 6 ರಂದು ಬೆಳಿಗ್ಗೆ 10.30 ಕ್ಕೆ ಕಾಸರಗೋಡು ಸಿವಿಲ್ ಸ್ಟೇಷನಿನ ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಕಛೇರಿಗೆ ಮೂಲ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿ(ದೂರವಾಣಿ ಸಂಖ್ಯೆ 04994 256162)ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.