ಉತ್ತರಕಾಶಿ : ಕುಸಿದಿರುವ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡ, ಕಾರ್ಮಿಕರತ್ತ ಮೂರನೇ ಎರಡರಷ್ಟು ದೂರದ ಮಾರ್ಗ ಕೊರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಕಾರಿ ಮಹಮೂದ್ ಅಹ್ಮದ್, 'ಸುರಂಗದಲ್ಲಿ ಅವಶೇಷಗಳ ನಡುವೆ 39 ಮೀಟರ್ (128 ಅಡಿ) ದೂರ ಕೊರೆಯಲಾಗಿದೆ. ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ..' ಎಂದು ತಿಳಿಸಿದ್ದಾರೆ.
ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ತರಲು ಕನಿಷ್ಠ 57 ಮೀಟರ್‌ವರೆಗೆ ಸ್ಟೀಲ್ ಪೈಪ್ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.