ರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಂಚಿಗೆ ಭೇಟಿ ನೀಡಿದ್ದ ವೇಳೆ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಂಚಿಗೆ ಭೇಟಿ ನೀಡಿದ್ದ ವೇಳೆ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಗೌರವ ನಮನ ಸಲ್ಲಿಸಲು ಮೋದಿ ಅವರು ಬಿರ್ಸಾ ಮುಂಡಾ ಮೆಮೊರಿಯಲ್ ಪಾರ್ಕ್‌ಗೆ ಬುಧವಾರ ಆಗಮಿಸಿದ್ದರು.
ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿ ತಕ್ಷಣವೇ ಅವರನ್ನು ಹಿಡಿದು, ವಶಕ್ಕೆ ಪಡೆದರು.
ಪ್ರಧಾನಿ ಭೇಟಿ ವೇಳೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಒಬ್ಬರು ಎಎಸ್‌ಐ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿರ್ಸಾ ಮುಂಡಾ ಅವರ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಮೋದಿ ಅವರು ಜಾರ್ಖಂಡ್‌ಗೆ ಎರಡು ದಿನಗಳ ಭೇಟಿ ಕೈಗೊಂಡಿದ್ದರು.