ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ಶುಕ್ರವಾರದಿಂದ ಮೂರು ದಿನ ವಿಶ್ವ ಹಿಂದೂ ಕಾಂಗ್ರೆಸ್ ಸಮಾವೇಶ ನಡೆಯಲಿದೆ.
ರಾಜಧಾನಿ ಬ್ಯಾಂಕಾಕ್‌ನಲ್ಲಿ ನಡೆಯಲಿರುವ ವಿಶ್ವ ಹಿಂದೂ ಕಾಂಗ್ರೆಸ್ ಸಮಾವೇಶವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉದ್ಘಾಟಿಸಲಿದ್ದಾರೆ.
ಈ ಸಮಾವೇಶದಲ್ಲಿ ಹಿಂದೂ ಧರ್ಮದ ಚಿಂತಕರು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅಲ್ಲದೆ, ಕೀನ್ಯಾ, ಆಸ್ಟ್ರೇಲಿಯಾ, ಜರ್ಮನಿ, ನ್ಯೂಜಿಲೆಂಡ್ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳ ರಾಜಕೀಯ ಮುಖಂಡರು ಮತ್ತು ಉದ್ಯಮಿಗಳು ಭಾಗಿಯಾಲಿದ್ದಾರೆ.
ಪ್ರತಿ ನಾಲ್ಕು ವರ್ಷಕ್ಕೆ ಒಮ್ಮೆ ಈ ಸಮಾವೇಶ ನಡೆಯಲಿದೆ.