ಪಾಲಕ್ಕಾಡ್/ಮೈಸೂರು: ಪ್ರಸ್ತುತ ದಿನಗಳಲ್ಲಿ ಹೃದಯಾಘಾತವು ಕೂಡ ಒಂದು ಟ್ರೆಂಡಿಂಗ್ ವಿಷಯವಾಗಿದೆ. ಈ ಹೃದಯಾಘಾತ ಯಾವಾಗ? ಯಾರಿಗೆ? ಹೇಗೆ? ಬರುತ್ತದೋ ಗೊತ್ತಿಲ್ಲ. ಆಟವಾಡುತ್ತಿರುವಾಗಲೇ ಕುಸಿದು ಬಿದ್ದು, ಆಸ್ಪತ್ರೆಗೆ ಬರುವಷ್ಟರಲ್ಲಿ ಹೃದಯಾಘಾತದಿಂದ ಸಾಯುವವರೂ ಇದ್ದಾರೆ.

ಇದೀಗ ಶಾಲಾ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದಲ್ಲಿ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಶ್ರೀಶಯನ ಎಂದು ಗುರುತಿಸಲಾಗಿದೆ. ಈಕೆ ಪಲಕ್ಕಾಡ್ನ ಪುಲಪಟ್ಟದಲ್ಲಿರುವ ಎನ್. ಕೆ.ಎಂ. ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೊನ್ನೆ (ನ.06) ರಾತ್ರಿ ಮೈಸೂರು ಅರಮನೆಯನ್ನು ನೋಡಿಕೊಂಡು ವಾಪಸ್ ಬರುವಾಗ ಶ್ರೀಶಯನಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದಾದರೂ ಆಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಮೂರು ಬಸ್ಗಳಲ್ಲಿ 135 ವಿದ್ಯಾರ್ಥಿಗಳು ಮತ್ತು 15 ಶಿಕ್ಷಕರ ಸೇರಿ ಒಟ್ಟು 150 ಮಂದಿ ಮೈಸೂರು ಪ್ರವಾಸ ಕೈಗೊಂಡಿದ್ದರು. ಇದೀಗ ವಿದ್ಯಾರ್ಥಿನಿ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ. ಎಲ್ಲ ಬಸ್ಗಳು ಕೇರಳಕ್ಕೆ ಮರಳಿವೆ.