ಕೊಟ್ಟಾಯಂ: ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಇಲ್ಲಿನ ಪಂಪಾಡಿ ಬಳಿಯ ಹೋಟೆಲ್‌ವೊಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.
ತನ್ನ ಆವರಣದಲ್ಲಿ ದೀರ್ಘಕಾಲದಿಂದ ನಿಲ್ಲಿಸಿರುವ ಕಾರಿನೊಳಗೆ ವ್ಯಕ್ತಿಯೊಬ್ಬ ಇರುವುದಾಗಿ ಹೋಟೆಲ್ ಆಡಳಿತವು ಮಾಹಿತಿ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಬಳಿಕ ಅವರು ಕಾರಿನೊಳಗೆ ಇದ್ದದ್ದು ನಮಗೆ ತಿಳಿದುಬಂತು ಮತ್ತು ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದೆವು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಸದ್ಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.
ಥಾಮಸ್ ಅವರು 'ಅಯ್ಯಪ್ಪನುಮ್ ಕೊಶ್ಯುಮ್', 'ನಾಥೋಲಿ ಒರು ಚೆರಿಯ ಮೀನಲ್ಲಾ', 'ಒರು ಮುರೈ ವಂತ್ ಪಾಠಯಾ', 'ಹ್ಯಾಪಿ ವೆಡ್ಡಿಂಗ್' ಮತ್ತು 'ಜೂನ್' ಸೇರಿದಂತೆ ಇತರ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ.