ಚಂಡೀಗಡ: ರಾಜ್ಯದ ನಿವಾಸಿಗಳಿಗೆ ಖಾಸಗಿ ವಲಯದ ಉದ್ಯೋಗದಲ್ಲೂ ಶೇ 75ರಷ್ಟು ಮೀಸಲಾತಿ ಕಲ್ಪಿಸಿದ್ದ ಹರಿಯಾಣ ಸರ್ಕಾರದ ಕಾನೂನನ್ನು ರದ್ದುಗೊಳಿಸಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಶನಿವಾರ ಇಲ್ಲಿ ತಿಳಿಸಿದರು.
'ರದ್ದುಗೊಂಡ ಕಾನೂನು ರಾಜ್ಯ ಹಾಗೂ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುತ್ತಿತ್ತು. ಹೈಕೋರ್ಟ್‌ನ ಈ ತೀರ್ಪನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದೇವೆ' ಎಂದು ಚೌಟಾಲಾ ಹೇಳಿದರು.
'ಸ್ಥಳೀಯ ಯುವಕರಿಗೆ ಉದ್ಯೋಗ ಹಾಗೂ ಕೈಗಾರಿಕೆಗಳಿಗೆ ಕೌಶಲ ಹೊಂದಿದ ಕೆಲಸಗಾರರನ್ನು ಒದಗಿಸಿಕೊಡುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿತ್ತು' ಎಂದರು.