ಕಣ್ಣೂರು: ನವ ಕೇರಳ ಸಮಾವೇಶಕ್ಕಾಗಿ ಮುಖ್ಯಮಂತ್ರಿ ಹಾಗೂ ಸಚಿವರು ಪ್ರಯಾಣಿಸುತ್ತಿದ್ದ ಬಸ್‍ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು.
ಪಳಯಂಗಡಿಯ ಎರಿಪುರಂನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ ಪ್ರತಿಭಟನಾಕಾರರನ್ನು ಡಿವೈಎಫ್‍ಐ ಕಾರ್ಯಕರ್ತರು ಥಳಿಸಿದ್ದಾರೆ.
ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ಮಹಿತಾ ಹಾಗೂ ಸುಧೀಶ್ ಅನಿರೀಕ್ಷಿತವಾಗಿ ಕಪ್ಪು ಬಾವುಟ ಹಿಡಿದು ವಾಹನದ ಮುಂದೆ ಜಿಗಿದಿದ್ದಾರೆ. ಆಗ ಡಿವೈಎಫ್‍ಐ ಕಾರ್ಯಕರ್ತರು ಗುಂಪು ಗುಂಪಾಗಿ ಥಳಿಸಿದ್ದಾರೆ. ನಂತರ ಪೋಲೀಸರು ಆಗಮಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಡಿವೈಎಫ್‍ಐ-ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಘರ್ಷಣೆಯಲ್ಲಿ ಗಾಯಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಳಿಪರಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯೊಳಗೆ ಪೆÇಲೀಸರು ವಶಕ್ಕೆ ಪಡೆದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಡಿವೈಎಫ್‍ಐ ಕಾರ್ಯಕರ್ತರು ಥಳಿಸಿದ್ದಾರೆ ಎಂಬ ದೂರು ಇದೆ.