ಕಾಸರಗೋಡು: ಕಾಸರಗೋಡು ಪೆರಿಯ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಡಾ. ಇಫ್ತಿಕರ್ ಅಹ್ಮದ್ ಅವರನ್ನು ಅಮಾನತುಗೊಳಿಸಲಾಗಿದೆ.
ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಉಪಕುಲಪತಿ ಡಾ. ಕೆ.ಸಿ.ಬೈಜು ಕ್ರಮಕೈಗೊಂಡರು. ಡಾ. ಇಫ್ತಿಕಾರ್ ಅಹಮದ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದು ದೂರು.
ಎಂಎ ಇಂಗ್ಲಿಷ್ ಮೊದಲ ವರ್ಷದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಂತರಿಕ ಕುಂದುಕೊರತೆ ಪರಿಹಾರ ಸಮಿತಿಗೆ ದೂರು ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಅಮಾನತುಗೊಳಿಸಲಾಗಿದೆ.
ಇವರ ವಿರುದ್ಧ ಕಾಲೇಜು ವಿದ್ಯಾರ್ಥಿನಿಯರು ನೀಡಿದ ದೂರಿನನ್ವಯ ವಿಶ್ವ ವಿದ್ಯಾಲಯದ ಆಂತರಿಕ ಸಮಿತಿ ತನಿಖೆ ನಡೆಸಿತ್ತು. ವಿದ್ಯಾರ್ಥಿನಿಯರು ನೀಡಿದ ದೂರಿನಲ್ಲಿ ಸತ್ಯಾಂಶವಿರುವುದಾಗಿ ಸಮಿತಿ ಪತ್ತೆಹಚ್ಚಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಾಧ್ಯಾಪಕಗೆ ಎರಡು ವಾರ ತರಗತಿ ನಡೆಸದಿರುಂತೆ ಸೂಚಿಸಲಾಗಿದೆ. ಮುಂದಿನ ಆದೇಶ ಲಭಿಸುವಲ್ಲಿ ವರೆಗೆ ವಿಶ್ವ ವಿದ್ಯಾಲಯ ಕೇಂದ್ರ ಬಿಟ್ಟು ಹೊರ ಹೋಗದಿರುವಂತೆ ಪ್ರಭಾರ ಉಪಕುಲಪತಿ ಡಾ ಕೆ.ಸಿ ಬೈಜು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
ನ. 13ರಂದು ವಿದ್ಯಾರ್ಥಿನಿಯರಿಂದ ದೂರು ಲಭಿಸಿದ್ದು, ಇಂಟರ್ನಲ್ ಪರೀಕ್ಷೆ ವೇಳೆ ಅಸೌಖ್ಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಧ್ಯೆ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಲ್ಲದೆ, ತರಗತಿಯಲ್ಲಿ ಅಶ್ಲೀಲವಾಗಿ ಮಾತನಾಡಿರುವುದಾಗಿ ವಿದ್ಯಾರ್ಥಿನಿಯರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಾಧ್ಯಾಪಕನ ವಿರುದ್ಧ ವಿದ್ಯಾರ್ಥಿ ಸಂಘಟನೆಗಳೂ ಪ್ರತಿಭಟನೆಗಿಳಿದಿದ್ದು, ಈ ವಿಷಯ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು.