ಮುಳ್ಳೇರಿಯ: ತೆಂಕುತಿಟ್ಟಿನ ಸುಪ್ರಸಿದ್ಧ ಹಿರಿಯ ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ ಅವರು ಪ್ರಸ್ತುತ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ಡಿ.23 ರಂದು ಶನಿವಾರ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಸಭಾ ಭವನದಲ್ಲಿ ಕೀರಿಕ್ಕಾಡು ಸಂಸ್ಮರಣೆಯೊಂದಿಗೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಕಲೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ಮಂಜೇಶ್ವರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.